- Advertisement -
- Advertisement -


ನೆಲ್ಯಾಡಿ: ಕಡಬ ತಾಲೂಕಿನ ಉದನೆಯ ಕಲಪ್ಪಾರಿನ ಮನೆಯೊಂದರಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ ಘಟನೆ ಭಾನುವಾರ ನಡೆದಿದೆ.
ಅಕ್ರಮ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳಕ್ಕೆ ಮಾಹಿತಿ ಲಭ್ಯವಾಗಿದ್ದು, ಅವರು ಪೊಲೀಸರಿಗೆ ತಿಳಿಸಿದ್ದಾರೆ. ಸುಮಾರು 50 ಕೆಜಿಯಷ್ಟು ದನದ ಮಾಂಸ ಹಾಗೂ 1 ಕಾರು , 5 ಬೈಕುಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ದಾಳಿ ನಡೆಸಿದ ವೇಳೆ ಸ್ಥಳದಲ್ಲಿದ್ದ ಕೆಲವರು ಪರಾರಿಯಾಗಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ.



- Advertisement -








