- Advertisement -
- Advertisement -
ಪಡುಬಿದ್ರಿ : ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮಹೀಂದ್ರ ಪಿಕ್ ಅಪ್ ವಾಹನ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಪಡುಬಿದ್ರಿ ಜಂಕ್ಷನ್‌ನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನೇಪಾಳ ಮೂಲದ ಲೋಕ್ ಬಹಾದ್ದೂರ್ ಕಡ್ಕ (42) ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಮೀನಾ ಕಡ್ಕಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಿಕ್‌ಅಪ್‌ನಲ್ಲಿದ್ದ ಇಬ್ಬರು ಗಾಯಗೊಂಡಿದ್ದು ಪಡುಬಿದ್ರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಲೋಕ್ ಬಹಾದ್ದೂರ್ ಕಡ್ಕ ದಂಪತಿ 17 ವರ್ಷಗಳ ಹಿಂದೆ ಮಂಗಳೂರಿಗೆ ಬಂದು ನೆಲೆಸಿ ಪಿಜಿಗಳಲ್ಲಿ ಆಹಾರ ತಯಾರಿಸುವ ಕೆಲಸ ಮಾಡುತ್ತಿದ್ದರು. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
- Advertisement -