Thursday, July 3, 2025
spot_imgspot_img
spot_imgspot_img

ಪಾಲಕ್ಕಾಡಿನಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಪತ್ತೆ

- Advertisement -
- Advertisement -

ತಿರುವನಂತಪುರಂ: ಸುಮಾರು 40 ರಟ್ಟಿನ ಬಾಕ್ಸ್ ಗಳಲ್ಲಿ ತುಂಬಿಸಿಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಕೇರಳದ ಪಾಲಕ್ಕಾಡಿನಲ್ಲಿ ಗುರುವಾರ ಪತ್ತೆಯಾಗಿದೆ.

40 ರಟ್ಟಿನ ಬಾಕ್ಸ್ ಗಳಲ್ಲಿ ತುಂಬಿಸಿಟ್ಟಿದ್ದ 8,000 ಜಿಲೆಟಿನ್ ಕಡ್ಡಿಗಳು ಸೇರಿದಂತೆ ಇತರ ಸ್ಫೋಟಕ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಥಳೀಯರ ಮಾಹಿತಿಯಾಧಾರಿತವಾಗಿ ಕಾರ್ಯಾಚರಣೆ ನಡೆಸಲಾಗಿದೆ. ಈಗಾಗಲೇ ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಟೊ ಕ್ವಾರಿಗಳಲ್ಲಿ ಬಂಡೆಗಳನ್ನು ಇಬ್ಬಾಗಿಸಲು ಜಿಲೆಟಿನ್ ಕಡ್ಡಿ ಬಳಸಲಾಗುತ್ತಿದ್ದು, ಅದೇ ಕಾರಣಕ್ಕೆ ಇದನ್ನು ಬಳಕೆ ಮಾಡುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ. 2000 ನೇ ಇಸವಿಯಲ್ಲಿಯೂ ಇದೇ ರೀತಿಯಲ್ಲಿ 7,500 ಡಿಟೋನೇಟರ್ಸ್ ಮತ್ತು 7,000 ಜಿಲೆಟಿನ್ ಕಡ್ಡಿಗಳನ್ನು ಸಾಗಾಟ ಮಾಡುವ ವೇಳೆ ಪೊಲೀಸರು ಅವುಗಳನ್ನು ವಶಪಡಿಸಕೊಂಡಿದ್ದರು.

- Advertisement -

Related news

error: Content is protected !!