- Advertisement -
- Advertisement -

ಪುಂಜಾಲಕಟ್ಟೆ: ನೆರೆಮನೆಯ ಅಪ್ರಾಪ್ತೆ ಬಾಲಕಿಯನ್ನು ಕರೆದುಕೊಂಡು ಹೋಗಿ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಲೈಂಗಿಕವಾಗಿ ದೌರ್ಜನ್ಯವೆಸಗಿದ ಬಗ್ಗೆ ಸಾಕ್ಷ್ಯವನ್ನು ಆಧರಿಸಿ ಆರೋಪಿ ಮೇಲೆ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಪಾಂಡವರಕಲ್ಲು ನಿವಾಸಿ ನೌಶಾದ್ ಮೇಲೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಪಾಂಡವರಕಲ್ಲು ಎಂಬಲ್ಲಿನ ಹತ್ತನೇ ತರಗತಿ ಬಾಲಕಿಯೋರ್ವಳು ಕಾಣೆಯಾಗಿದ್ದ ಬಗ್ಗೆ ಹೆತ್ತವರು ಪುಂಜಾಲಕಟ್ಟೆ ಪೋಲೀಸ್ ಠಾಣೆ ಮೊದಲು ದೂರು ನೀಡಿದ್ದು, ಕಿಡ್ನಾಪ್ ಪ್ರಕರಣ ದಾಖಲಾಗಿತ್ತು. ಬಳಿಕ ಆಕೆ ನೆರೆಮನೆಯ ನೌಶಾದ್ ಜೊತೆ ಪತ್ತೆಯಾಗಿದ್ದಳು. ಇದೀಗ ವೈದ್ಯಕೀಯ ರಿಪೋರ್ಟ್ ಆಧರಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯದ ಬಗ್ಗೆ ವೈದ್ಯರು ವರದಿ ನೀಡಿದ್ದಾರೆ. ಈ ವರದಿಯನ್ನು ಆಧರಿಸಿ ಪುಂಜಾಲಕಟ್ಟೆ ಪೋಲಿಸರು ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ.

- Advertisement -