Saturday, June 28, 2025
spot_imgspot_img
spot_imgspot_img

ಪುತ್ತೂರು : ಅಕ್ರಮ ಗಾಂಜಾ ಮಾರಾಟ ; ಆರೋಪಿ ಬಂಧನ

- Advertisement -
- Advertisement -

ಪುತ್ತೂರು : ಗ್ರಾಮಾಂತರ ಠಾಣಾ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.

ಪುತ್ತೂರು ನಿವಾಸಿ ಅಬೂಬಕ್ಕರ್ ಸಿದ್ದಿಕ್ ಬಂಧಿತ ಆರೋಪಿ. ಈತ ಕಾರಿನಲ್ಲಿ ಗ್ರಾಹಕರಿಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿಯಿಂದ ಸುಮಾರು ರೂ. 27,000/- ಮೌಲ್ಯದ 670 ಗ್ರಾಂ. ಗಾಂಜಾ ಮತ್ತು ಸುಮಾರು ರೂ. 70,000/- ಮೌಲ್ಯದ ಕಾರನ್ನು ವಶಪಡಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಾ.ವೀರಯ್ಯ ಹಿರೇಮಠ್, ಪುತ್ತೂರು ಗ್ರಾಮಾಂತರ ಪೊಲೀಸ್ ನಿರೀಕ್ಷಕ ಮಂಜುನಾಥ್ ಎಂ. ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ ಶ್ರೀನಾಥ್ ರೆಡ್ಡಿ ಮತ್ತು ಸುಬ್ರಹ್ಮಣ್ಯ, ಸಿಬ್ಬಂದಿಗಳಾದ ಎಎಸ್ಐ ಮುರುಗೇಶ್, ವರ್ಗೀಸ್, ದೇವರಾಜ್, ಅದ್ರಾಮ್, ಪ್ರವೀಣ್.ರೈ, ಹರೀಶ್, ಶಿವಾನಂದ, ಹರ್ಷಿತ್ ರವರ ತಂಡ ಸಹಕರಿಸಿರುತ್ತಾರೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

- Advertisement -

Related news

error: Content is protected !!