Sunday, July 26, 2026
spot_imgspot_img
spot_imgspot_img

ಪುತ್ತೂರು: ಆಟೋ ರಿಕ್ಷಾದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ, ಜೀವ ಬೆದರಿಕೆ.!

- Advertisement -
- Advertisement -

ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ಮಹಿಳೆಯನ್ನು ಕರೆದೊಯ್ದು ಮಾನಭಂಗಕ್ಕೆ ಯತ್ನಿಸಿದಲ್ಲದೆ ಜೀವ ಬೆದರಿಕೆಯೊಡ್ಡಿದ ಕುರಿತ ಆರೋಪಕ್ಕೆ ಸಂಬಂಧಿಸಿ ವ್ಯಕ್ತಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಟಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ವಾನ್ ಅವರು ಪರಿಚಯದ ಮಹಿಳೆಯೊಬ್ಬರನ್ನು ಮಾತನಾಡಲು ಇದೆ ಎಂದು ಹೇಳಿ ಆಟೋ ರಿಕ್ಷಾದಲ್ಲಿ ಕರೆದೊಯ್ದು ದರ್ಬೆ ಹರ್ಷ ಇಲೆಕ್ಟ್ರಾನಿಕ್ಸ್ ಬಳಿ ತಲುಪುತ್ತಿದ್ದಂತೆ ಮಹಿಳೆಯ ಕುತ್ತಿಗೆ ಹಿಡಿದು ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆಯೊಡ್ಡಿದ್ದಾರೆ. ಘಟನೆ ಕುರಿತು ನೊಂದ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಸೆಕ್ಷನ್ 354, 323, 504, 506ರಂತೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!