Friday, May 20, 2022
spot_imgspot_img
spot_imgspot_img

ಪುತ್ತೂರು: ಇಡಿ ವಿಶೇಷ ಸರಕಾರಿ ಅಭಿಯೋಜಕರಾಗಿ ನ್ಯಾಯವಾದಿ ಮಹೇಶ್ ಕಜೆ ನೇಮಕ

- Advertisement -
- Advertisement -

ಪುತ್ತೂರು: ಜಾರಿ ನಿರ್ದೇಶನಾಲಯದ ( ಇಡಿ ) ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕಗೊಂಡಿದ್ದಾರೆ.

ಉಪ್ಪಿನಂಗಡಿ ಸಮೀಪದ ಕೇದಾರ ನಿವಾಸಿಯಾಗಿರುವ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಯಾವುದೇ ಪ್ರಕರಣವಾದರೂ ಸಲೀಸಾಗಿ ಅದನ್ನು ನಿರೂಪಿಸುವ ಚಾಣಾಕ್ಷತನವನ್ನು ಹೊಂದಿದ್ದಾರೆ. ಬೊಳುವಾರು ಕಜೆ ಲಾ ಛೇಂಬರನ ಮುಖ್ಯಸ್ಥ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿರುವ ಇವರು, ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮಾಜಿ ಸದಸ್ಯ, ಜೆಸಿಐ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.

ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕ ರಿತೇಶ್ ಕುಮಾರ್ ಅವರು ಈ ಬಗ್ಗೆ ಟ್ವಿಟ್ ಮಾಡಿದ್ದು, ಬೆಂಗಳೂರಿನ ಶಾಂತಿನಗರ ಬಿಎಂಟಿಸಿ ಬಿ ಬ್ಲ್ಯಾಕ್‌ನಲ್ಲಿರುವ ಬೆಂಗಳೂರು ವಲಯ ಇಡಿ ಕಚೇರಿಗೆ ಹಾಜರಾಗಿ ಇಡಿ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳನ್ನು ಸ್ವೀಕರಿಸುವಂತೆ ಸೂಚಿಸಿದ್ದಾರೆ.

- Advertisement -

Related news

error: Content is protected !!