- Advertisement -
- Advertisement -
ಪುತ್ತೂರು : ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನರಿಂಗಾನ ನಿವಾಸಿ ಮೊಹಮ್ಮದ್ ಬಶೀರ್ ಎಂದು ಗುರುತಿಸಲಾಗಿದೆ.
2009ರಲ್ಲಿ ಗಾಂಜಾ ಪ್ರಕರಣದಲ್ಲಿ ಬಶೀರ್ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿದ್ದು, ಕಳೆದ ಐದು ವರ್ಷಗಳಿಂದ ವಿಚಾರಣೆಗೆ ಒಳಗಾಗಲು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.
ಆರೋಪಿಗಳ ವಿರುದ್ಧ ವಾರೆಂಟ್ ಜಾರಿ ಮಾಡಲಾಗಿದ್ದು, ಇದೀಗ ಪುತ್ತೂರು ನಗರ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ ಮೊಹಮ್ಮದ್ ಬಶೀರ್ ನನ್ನು ಬಂಧಿಸಲಾಗಿದೆ.
- Advertisement -