Sunday, September 20, 2026
spot_imgspot_img
spot_imgspot_img

ಪುತ್ತೂರು: ತವರು ಮನೆಗೆಂದು ತೆರಳಿದ್ದ ಮಹಿಳೆ ತನ್ನ ಮಗುವಿನೊಂದಿಗೆ ನಾಪತ್ತೆ; ದೂರು ದಾಖಲು

- Advertisement -
- Advertisement -

ಪುತ್ತೂರು: ತವರು ಮನೆಗೆ ಹೋಗಿದ್ದ ಮಹಿಳೆಯೊಬ್ಬರು ತನ್ನ ಪುಟ್ಟ ಮಗನೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ.

ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಪುಳಿತ್ತಡಿ ನಿವಾಸಿ ನೆಲ್ಯಾಡಿ ಅಲ್ತಾ ಎಂಬವರ ಪತ್ನಿ ಇರ್ಶಾನಾ (25) ಹಾಗೂ ಅವರ ಒಂದೂವರೆ ವರ್ಷದ ಮಗ ಮೊಹಮ್ಮದ್ ಆದಿಲ್ ನಾಪತ್ತೆಯಾಗಿರುವ ಬಗ್ಗೆ ಸಂಪ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.

ವಾರದ ಹಿಂದೆ ಇರ್ಶಾನಾ ಪುಳಿತ್ತಡಿಯಲ್ಲಿರುವ ತನ್ನ ತವರು ಮನೆಗೆ ಹೋಗಿದ್ದು, ಮದುವೆಗೆಂದು ಕೇರಳಕ್ಕೆ ತೆರಳಿದ್ದ ಆಕೆಯ ಪೋಷಕರು ಮೇ 20 ರಂದು ಮನೆಗೆ ಹಿಂದಿರುಗಿದಾಗ ಆಕೆ ತನ್ನ ಮಗನೊಂದಿಗೆ ನಾಪತ್ತೆಯಾಗಿದ್ದಳು.

ಈ ಬಗ್ಗೆ ಇರ್ಷಾನ ತಂದೆ ಅಬ್ದುಲ್ ಲತೀಫ್ ನೀಡಿದ ದೂರಿನ ಮೇರೆಗೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!