Thursday, February 2, 2023
spot_imgspot_img
spot_imgspot_img

ಪ್ರಯೋಜನವಿಲ್ಲದ ಬಸ್‌ ಪಾಸ್‌; ವಿಟ್ಲ ಮತ್ತು ಕಡೆಶಿವಾಲಯಕ್ಕೆ ಬಸ್‌ ಇಲ್ಲದೆ ವಿದ್ಯಾರ್ಥಿಗಳ ಪರದಾಟ

- Advertisement -G L Acharya G L Acharya
vtv vitla
- Advertisement -

ಬಂಟ್ವಾಳ: ಸಂಜೆಯ ಹೊತ್ತಲ್ಲಿ ಕಾಲೇಜ್‌ ವಿದ್ಯಾರ್ಥಿಗಳಿಗೆ ಬಸ್‌ ಇಲ್ಲದೇ ಪರದಾಡುವಂತಾಗಿದೆ. ಬಸ್‌ ಪಾಸ್‌ ಇದ್ದು ವಿದ್ಯಾರ್ಥಿಗಳು ಖಾಸಗಿ ಬಸ್‌ನಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆ ಇದ್ದರು, ಸಾರಿಗೆ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂಬ ಆಕ್ರೋಶ ಕೇಳಿಬರುತ್ತಿದೆ.

ಮಂಗಳೂರಿನಿಂದ ವಿಟ್ಲ ಮತ್ತು ಕಡೆಶಿವಾಲಯಕ್ಕೆ ಹೋಗುವ ವಿದ್ಯಾರ್ಥಿಗಳು ಬಸ್‌ ಪಾಸ್‌ ಮಾಡಿಸಿದರು ಯಾವುದೇ ಪ್ರಯೋಜನವಿಲ್ಲದಂತಾಗಿದೆ. ಸಂಜೆ 4ರಿಂದ 6ಗಂಟೆ ತನಕ ಯಾವುದೇ ಸರ್ಕಾರಿ ಬಸ್ ಇಲ್ಲದೆ ವಿದ್ಯಾರ್ಥಿಗಳು ಖಾಸಗಿ ಬಸ್ ನಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆ ಇದೆ. ಹೆಚ್ಚುವರಿ ಬಸ್‌ಗಾಗಿ ವಿದ್ಯಾರ್ಥಿಗಳು ಬಿ.ಸಿ ರೋಡ್ ಮತ್ತು ಪುತ್ತೂರು ಕ.ರಾ.ರ.ಸಾ.ನಿಗಮದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕೂಡ ಯಾವುದೇ ರೀತಿಯ ಸ್ಪಂದನೆ ದೊರೆಯುತ್ತಿಲ್ಲ.

ಬಸ್‌ ಇಲ್ಲದ ಕಾರಣ ವಿದ್ಯಾರ್ಥಿಗಳಿಗೆ ಮನೆಗೆ ತಲುಪಲು ತಡವಾಗುತ್ತಿದ್ದು, ಇದು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀಳುತ್ತಿದೆ. ಕ.ರಾ.ರ.ಸಾನಿ ನಿಯಂತ್ರಣ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳು ಬೇಸತ್ತು ಹೋಗಿದ್ದರೆ.

- Advertisement -

Related news

error: Content is protected !!