Friday, July 24, 2026
spot_imgspot_img
spot_imgspot_img

ಪ್ರೀತಿಸಿ ಮದುವೆಯಾದ ಯುವ ಜೋಡಿಯಿಂದ ಆತ್ಮಹತ್ಯೆ ಬೆದರಿಕೆ!

- Advertisement -
- Advertisement -

ಯಾದಗಿರಿ: ಪ್ರೀತಿಸಿ ಮದುವೆಯಾದ ನವ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದೆ. ಯುವತಿಯ ಪೋಷಕರು, ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ.

ಯಾದಗಿರಿ ತಾಲೂಕಿನ ಹಳಗೇರ ನಿವಾಸಿ ಭೀಮರಾಯ ಮತ್ತು ಉತ್ತರ ಕನ್ನಡ ಜಿಲ್ಲೆಯ ಚಂದ್ರಕಲಾ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಜನವರಿ 31 ರಂದು ನೋಂದಣಿ ಕಚೇರಿಯಲ್ಲಿ ಮದುವೆಯಾಗಿದ್ದರು. ಆದರೆ ಪೋಷಕರು, ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಓದುವಾಗ ಪರಸ್ಪರ ಪ್ರೀತಿಸುತ್ತಿದ್ದರು. ಬೆಂಗಳೂರಿನಲ್ಲಿ ಯುವತಿ ಪೋಷಕರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದರು. ಇದೀಗ ಪೋಷಕರು ಕಿರುಕುಳ ನೀಡುತ್ತಿದ್ದಾರೆ ಅಂತ ಯುವತಿ ಆರೋಪಿಸಿದ್ದಾಳೆ. ಕಿರುಕುಳದಿಂದ ಮನನೊಂದು ಆತ್ಮಹತ್ಯೆಯ ಬೆದರಿಕೆ ಹಾಕಿದ್ದಾರೆ.

- Advertisement -

Related news

error: Content is protected !!