Sunday, June 14, 2026
spot_imgspot_img
spot_imgspot_img

ಬಂಟ್ವಾಳ : ಕಾಂಕ್ರೀಟ್ ಕೆಲಸದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಮೃತ್ಯು

- Advertisement -
- Advertisement -

ಬಂಟ್ವಾಳ: ಮನೆಯೊಂದರ ಮಹಡಿಗೆ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಕಾರ್ಮಿಕರೊರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು ನಿವಾಸಿ ಪ್ರಕಾಶ್ ಮೃತ ವ್ಯಕ್ತಿ.

ಅಮ್ಟಾಡಿ ಗ್ರಾ.ಪಂ.ಸದಸ್ಯನಾಗಿದ್ದ ಇವರು ಸಾಮಾಜಿಕವಾಗಿ ಉತ್ತಮ ಕೆಲಸಗಾರನಾಗಿದ್ದರು‌. ಬಡಾಜೆ ಎಂಬಲ್ಲಿ ಮನೆಯೊಂದರ ಎರಡನೇ ಮಹಡಿಗೆ ಇವರು ಸೇರಿ ಒಟ್ಟು ಮೂರು ಮಂದಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದರು. ಆದರೆ ಏಕಾಏಕಿ ಕಾಂಕ್ರೀಟ್ ಹಲಗೆಗಳು ಮತ್ತು ಜಾಕ್ ಗಳು ಮುರಿದು ಬಿದ್ದ ಪರಿಣಾಮ ಇಬ್ಬರು ಕೆಳಗೆ ಹಾರಿದ್ದಾರೆ. ಪ್ರಕಾಶ್ ಮಾತ್ರ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಕೂಡಲೇ ತುಂಬೆ ಫಾದರ್ ಮುಲ್ಲರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.
ಉಳಿದಂತೆ ಇನ್ನಿಬ್ಬರು ಕೆಲಸಗಾರರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!