Monday, July 27, 2026
spot_imgspot_img
spot_imgspot_img

ಬಂಟ್ವಾಳ : ಕಾಂಗ್ರೆಸ್ ವತಿಯಿಂದ ವಿಧಾನಪರಿಷತ್ ಚುನಾವಣಾ ಪೂರ್ವಭಾವಿ ಸಭೆ

- Advertisement -
- Advertisement -

vtv vitla

ಬಂಟ್ವಾಳ : ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಇದರ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯ ವಿಧಾನಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಯವರ ಚುನಾವಣಾ ಪೂರ್ವಭಾವಿ ಪ್ರಚಾರ ಸಭೆಯು ಬಿ.ಸಿ.ರೋಡ್ ಗಾಣದಪಡ್ಪು ಶ್ರೀ ನಾರಾಯಣ ಗುರು ಮಂದಿರ ದಲ್ಲಿ ನಡೆಯಿತು.

ಕಾರ್ಯಕ್ರಮವನ್ನು  ಮಾಜಿ ಸಚಿವ ಬಿ. ರಮಾನಾಥ ರೈ  ಉದ್ಘಾಟಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಮಂಜುನಾಥ ಭಂಡಾರಿ ಮಾತನಾಡಿದರು. 

ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಚುನಾವಣೆ ಉಸ್ತುವಾರಿಗಳಾದ ಪ್ರವೀಣ್ ಚಂದ್ರ ಆಳ್ವ, ಮಮತಾ ಗಟ್ಟಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಉಪಾಧ್ಯಕ್ಷ ಬಿ.ಎಚ್ ಖಾದರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪದ್ಮಶೇಖರ್ ಜೈನ್, ಎಂ.ಎಸ್.ಮಹಮ್ಮದ್, ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಕುಮಾರ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಲ್ಲಿಕಾ ಪಕ್ಕಳ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ, ಮಂಗಳೂರು ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ರವೂಫ್ ಮಂಗಳೂರು, ಪ್ರಮುಖರಾದ ಸುದರ್ಶನ್ ಜೈನ್, ಬಿ.ಎಂ.ಅಬ್ಬಾಸ್ ಅಲಿ, ಚಿತ್ತರಂಜನ್ ಶೆಟ್ಟಿ, ಕೆ.ಪದ್ಮನಾಭ ರೈ, ಶರೀಫ್ ಶಾಂತಿ ಅಂಗಡಿ ಮೊದಲಾದವರು ಉಪಸ್ಥಿತರಿದ್ದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಬೇಬಿ ಕುಂದರ್ ಸ್ವಾಗತಿಸಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ವಂದಿಸಿದರು. ಕೆ.ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರೂಪಿಸಿದರು.
vtv vitla
vtv vitla
- Advertisement -

Related news

error: Content is protected !!