- Advertisement -
- Advertisement -
ಬಂಟ್ವಾಳ: ಕಾರು ಹಾಗೂ ಬೈಕ್ ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಗಿರೀಶ್ ಮಾರ್ನಬೈಲು ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಾಗಿದ್ದಾರೆ.
ಗಿರೀಶ್ ಅವರು ಪ್ಲಂಬರ್ ಕೆಲಸಗಾರ ಮಾಡುತ್ತಿದ್ದು, ಬುಧವಾರ ಬೆಳಗ್ಗೆ ತನ್ನ ದ್ವಿಚಕ್ರದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಕಲ್ಲಡ್ಕ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಗೆ ಅತಿ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಬೈಕ್ ಸವಾರನ ಎರಡು ಕಾಲು ಹಾಗೂ ಕೈಗಳಿಗೆ ಗಂಭೀರವಾಗಿ ಗಾಯಗೊಂಡಿದ್ದು, ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರು ಢಿಕ್ಕಿಯಾದ ರಭಸಕ್ಕೆ ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -