Sunday, September 20, 2026
spot_imgspot_img
spot_imgspot_img

ಬಂಟ್ವಾಳ: ಕಾರು ಹಾಗೂ ಬೈಕ್ ನಡುವೆ ಪರಸ್ಪರ ಢಿಕ್ಕಿ; ಬೈಕ್ ಸವಾರ ಗಂಭೀರ..!

- Advertisement -
- Advertisement -

ಬಂಟ್ವಾಳ: ಕಾರು ಹಾಗೂ ಬೈಕ್ ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಬುಧವಾರ ನಡೆದಿದೆ.

ಗಿರೀಶ್ ಮಾರ್ನಬೈಲು ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಾಗಿದ್ದಾರೆ. ಗಿರೀಶ್ ಅವರು ಪ್ಲಂಬರ್ ಕೆಲಸಗಾರ ಮಾಡಿತ್ತಿದ್ದು, ಬುಧವಾರ ಬೆಳಗ್ಗೆ ತನ್ನ ದ್ವಿಚಕ್ರದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಕಲ್ಲಡ್ಕ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಗೆ ಅತಿ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಬೈಕ್ ಸವಾರನ ಎರಡು ಕಾಲು ಹಾಗೂ ಕೈಗಳಿಗೆ ಗಂಭೀರವಾಗಿ ಗಾಯಗೊಂಡಿದ್ದು, ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!