Monday, June 22, 2026
spot_imgspot_img
spot_imgspot_img

ಬಂಟ್ವಾಳ : (ಜ.28) ನೇತಾಜಿ ಗೆಳೆಯರ ಬಳಗ ಇದರ ಆಶ್ರಯದಲ್ಲಿ ಕಬಡ್ಡಿ ಹಾಗೂ ಪುರುಷರ ವಾಲಿಬಾಲ್ ಪಂದ್ಯಾಟ

- Advertisement -
- Advertisement -

ಬಂಟ್ವಾಳ : ನೇರಳಕಟ್ಟೆ – ನೇತಾಜಿ ನಗರದ ನೇತಾಜಿ ಗೆಳೆಯರ ಬಳಗ ಇದರ ಆಶ್ರಯದಲ್ಲಿ ಮುಕ್ತ ಹೊನಲು ಬೆಳಕಿನ ಪುರುಷರ 60 ಕೆ.ಜಿ. ವಿಭಾಗದ ಪ್ರೋ ಮಾದರಿಯ ಕಬಡ್ಡಿ ಹಾಗೂ ಪುರುಷರ ವಾಲಿಬಾಲ್ ಪಂದ್ಯಾಟ ಜ.28 ರಂದು ನೇತಾಜಿ ಕ್ರೀಡಾಂಗಣ ನೇರಳಕಟ್ಟೆ ರೈಲ್ವೇ ನಿಲ್ದಾಣದ ಬಳಿ ನಡೆಯಲಿದೆ.

ಸಮಾರಂಭವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹಾಗೂ ಕ್ರೀಡಾಂಗಣವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದು ಉರ್ದಿಲಗುತ್ತು ರಾಮ್ ಪ್ರಸಾದ್ ರೈ ಅಧ್ಯಕ್ಷತೆ ವಹಿಸುವರು. ಅನಂತ ಪ್ರಭು ಸದ್ಗುರು ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸುವರು.

ಇದೇ ವೇಳೆ ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಡಾ. ಎಂ.ಕೆ. ಪ್ರಸಾದ್ ಭಂಡಾರಿ, ನಾಟಿ ವೈದ್ಯ ಗಂಗಾಧರ ಪಂಡಿತ್ ಗೋಳಿಕಟ್ಟೆ, ಶಿಕ್ಷಕಿ ಸುಲೋಚನಾ ರೈ ಅವರನ್ನು ಸನ್ಮಾನಿಸಲಾಗುವುದು ಎಂದು ನೇತಾಜಿ ಗೆಳೆಯರ ಬಳಗದ ಅಧ್ಯಕ್ಷ ಹರೀಶ್ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!