Tuesday, August 18, 2026
spot_imgspot_img
spot_imgspot_img

ಬಂಟ್ವಾಳ: ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ನಾಪತ್ತೆ

- Advertisement -
- Advertisement -

ಬಂಟ್ವಾಳ: ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೋರ್ವ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾದ ಘಟನೆ ನಡೆದಿದೆ. ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಎಂದು ನದಿ ಇಳಿದಾಗ ಅವಘಡ ಸಂಭವಿಸಿದೆ.

ಛತ್ತೀಸ್ ಘಡ್ ರಾಜ್ಯದ ಬಸ್ತರ ಜಿಲ್ಲೆಯ ಬಡ್ಡೆಬಂದಮ ಗ್ರಾಮದ ಜಮ್ಮವಾಡ ನಿವಾಸಿ ಆನಂದ ಕಶ್ಯಪ (28) ಕಾಣೆಯಾದ ವ್ಯಕ್ತಿ. ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಒಂದು ತಿಂಗಳಿನಿಂದ ಬಂಟ್ವಾಳ ರೈಲ್ವೆ ಸ್ಟೇಷನ್ ನ ಪಕ್ಕದಲ್ಲಿ ರೈಲ್ವೆ ವಿದ್ಯುದೀಕರಣ ಕಾಮಗಾರಿಯನ್ನು ಮಾಡಿಕೊಂಡಿದ್ದು, ಜೊತೆಯಲ್ಲಿ ಛತ್ತೀಸ್ ಘಡ್ ಮೂಲದ ಕೆಲಸಗಾರರು ಇದ್ದರು.

ಆನಂದ ಕಶ್ಯಪ ಅವರು ಕೆಲಸ ಮುಗಿಸಿ ಬಳಿಕ ಅಲ್ಲೇ ಸಮೀಪ ನೇತ್ರಾವತಿ ನದಿಗೆ ಕೈಕಾಲು ತೊಳೆಯುವ ಉದ್ದೇಶದಿಂದ ನೀರಿಗೆ ಇಳಿದ ವೇಳೆ ಆಯ ತಪ್ಪಿ ನದಿಗೆ ಬಿದ್ದು ಬೊಬ್ಬೆ ಹೊಡೆದಾಗ ಆತನೊಂದಿಗೆ ಇತರ ಕೆಲಸಗಾರರು ಓಡಿ ಹೋಗಿ ನೋಡಿದಾಗ ಆತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಕಾಣೆಯಾಗಿದ್ದಾನೆ ಎಂದು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!