

ಬಂಟ್ವಾಳ: ಎಸ್ ವಿಎಸ್ ಕಾಲೇಜಿನ ಬಳಿ ಇರುವ ಮಂಡಾಡಿ ಮಾರ್ಗಸೂಚಿ ಕಟ್ಟೆ ಹಾಗೂ ಅದರಲ್ಲಿದ್ದ ಭಗವಾಧ್ವಜ ಹಾಗೂ ಹನುಮನ ಚಿತ್ರವನ್ನು ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ಅ.18ರಂದು ತಡರಾತ್ರಿ ನಡೆದಿದೆ.

ಕಳೆದ 10-12 ವರ್ಷಗಳಿಂದ ಈ ಕಟ್ಟೆ ಇದ್ದು , ಕಳೆದ ಕೆಲವು ದಿನಗಳ ಹಿಂದೆ ವಿಶ್ವ ಹಿಂದೂ ಪರಿಷತ್ ಮಂಡಾಡಿ ಶಾಖೆಯು ನವೀಕರಣಗೊಳಿಸಿತ್ತು. ಅದಕ್ಕೆ ಹನುಮಂತನ ಚಿತ್ರ , ಭಗವಾಧ್ವಜ ಅಳವಡಿಸಿ ನವೀಕರಣಗೊಳಿಸಿತ್ತು. ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಕಟ್ಟೆಯನ್ನು ಒಡೆದುಹಾಕಿ, ಭಗವಾಧ್ವಜವನ್ನು ಕಿತ್ತೊಯ್ದಿದ್ದಾರೆ. ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ ರಿಟ್ಝ್ ಕಾರು ಈ ದಾರಿಯಲ್ಲಿ ಸಂಚರಿಸಿದ್ದು , ಸಿಸಿಟಿವಿಯಲ್ಲಿ ದಾಖಲಾಗಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂಟ್ವಾಳ ವಿಹಿಂಪನ ಜಿಲ್ಲಾ ಸಹಸಂಚಾಲಕ ಗುರುರಾಜ್ ಬಂಟ್ವಾಳ, ದೀಪಕ್ ಬಂಟ್ವಾಳ, ಸಂತೋಷ್ ಸರಪಾಡಿ, ಶಿವಪ್ರಸಾದ್ ತುಂಬೆ, ಅನಿಲ್ ಮಂಡಾಡಿ, ದೂರು ನೀಡಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಸದ್ಯ ಪೊಲೀಸರು ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ಮಾರ್ಗಸೂಚಿ ಕಟ್ಟೆಯು ಮೂಡಬಿದ್ರೆ , ಮಂಡಾಡಿ, ಬಿಸಿರೋಡ್ ಗೆ ರಸ್ತೆ ಮಾರ್ಗವನ್ನು ಸೂಚಿಸುತ್ತಿತ್ತು.











