Saturday, September 19, 2026
spot_imgspot_img
spot_imgspot_img

ಬೆಳ್ತಂಗಡಿ: ಕಾಲೇಜಿನಲ್ಲಿ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ಲಾಯಿಲದ ಕಾಶಿಬೆಟ್ಟಿನಲ್ಲಿರುವ ಪ್ರಸನ್ನ ಕಾಲೇಜು ವಿದ್ಯಾರ್ಥಿ ರಕ್ತದ ಒತ್ತಡದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಮೃತ ವಿದ್ಯಾರ್ಥಿ ಬಾರ್ಯ ಗ್ರಾಮದ ಗಿರಿಗುಡ್ಡೆ ಸುಶೀಲ ಎಂಬುವವರ ಮಗ ಸುಮಂತ್ ಮಡಿವಾಳ(20) ಗುರುತಿಸಲಾಗಿದೆ.

ಕಳೆದ ಕೆಲ ದಿನಗಳಿಂದ ಮಂಗಳೂರಿನ ಫಸ್ಟ್ ನೀರೋ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಒಂದು ವಾರದ ಹಿಂದೆ ಕಾಲೇಜಿನಲ್ಲಿ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ದಾಖಲಿಸಲಾಗಿತ್ತು. ವಿದ್ಯಾರ್ಥಿ ಬೆಳ್ತಂಗಡಿಯ ಪ್ರಸನ್ನ ಕಾಲೇಜಿನ ಕೊನೆಯ ವರ್ಷದ ಐಟಿಐ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!