Sunday, October 4, 2026
spot_imgspot_img
spot_imgspot_img

ಬೆಳ್ತಂಗಡಿ: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಎಂ.ಕಾಂ ವಿದ್ಯಾರ್ಥಿನಿ

- Advertisement -
- Advertisement -
driving

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯೋರ್ವಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆ ಎಂಬಲ್ಲಿ ನಡೆದಿದೆ.

ಹುಣ್ಸೆಕಟ್ಟೆ ನಿವಾಸಿ ದೀಕ್ಷಾ (22) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಕಾಂ ಪದವಿ ಪಡೆಯುತ್ತಿದ್ದ ದೀಕ್ಷಾ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು ಎಂದು ಹೇಳಲಾಗುತ್ತಿದೆ. ಈ ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ದೀಕ್ಷಾ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಡೆತ್‌ನೋಟ್‌ನಲ್ಲಿ ಯಾವೆಲ್ಲಾ ವಿಚಾರವನ್ನು ಬರೆದಿದ್ದಾಳೆ ಅನ್ನೋದು ಪೊಲೀಸರ ತನಿಖೆಯ ಬಳಿಕ ತಿಳಿದು ಬರಬೇಕಾಗಿದೆ.

- Advertisement -

Related news

error: Content is protected !!