Friday, June 5, 2026
spot_imgspot_img
spot_imgspot_img

ಬೆಳ್ತಂಗಡಿ: ನದಿಯ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

- Advertisement -
- Advertisement -
vtv vitla

ಬೆಳ್ತಂಗಡಿ: ನದಿಯ ಕಿಂಡಿ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ಜ.10 ರಂದು ಸಂಜೆ ವರದಿಯಾಗಿದೆ.

ಕುಳಿತುಕೊಂಡ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹವು ಪತ್ತೆಯಾದ ಘಟನೆಯು ಇಲ್ಲಿನ ಲಾಯಿಲ ಗ್ರಾಮದ ಸೋಮಾವತಿ ನದಿ ಅಣೆಕಟ್ಟಿನ ಬದಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಲಾಯಿಲ ಗ್ರಾಮದ ಅಯೋಧ್ಯನಗರ ನಿವಾಸಿ ಕಿರಣ್ ಗಾಣಿಗ (27) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಹಾಗೂ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನು ಕಿರಣ್ ಸಾವಿಗೆ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆತನೇ ಆತ್ಮಹತ್ಯೆ ನಡೆಸಿಕೊಂಡಿದ್ದಾನೆಯೇ ಎನ್ನುವ ಬಗ್ಗೆ ತನಿಖೆ ನಡೆಯಬೇಕಿದೆ. ಕುಳಿತ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದ್ದು, ಕೊಲೆ ಎನ್ನುವ ಶಂಕೆ ವ್ಯಕ್ತವಾಗಿದೆ.

- Advertisement -

Related news

error: Content is protected !!