Wednesday, September 9, 2026
spot_imgspot_img
spot_imgspot_img

ಬೆಳ್ತಂಗಡಿ: ರಿಕ್ಷಾ-ಸ್ಕೂಟರ್ ನಡುವೆ ಅಪಘಾತ; ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ರಿಕ್ಷಾ ಹಾಗೂ ಸ್ಕೂಟರ್ ನಡುವಿನ ಅಪಘಾತವೊಂದರಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ನಿತ್ಯಾನಂದ ಪೂಜಾರಿ (48) ಮೃತಪಟ್ಟವರಾಗಿದ್ದಾರೆ.

ಕೊಕ್ರಾಡಿ–ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ನಿತ್ಯಾನಂದ ಪೂಜಾರಿ ಅವರು ಸ್ಕೂಟರ್‌ನಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಆಟೊ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ನಿತ್ಯಾನಂದ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!