


ಬೆಳ್ಳಾರತೆ: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದ ವತಿಯಿಂದ ನೀಡಲಾದ ಭರವಸೆಯನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು, ಒಂದು ವೇಳೆ ತಪ್ಪಿದ್ದಾರೆ ಸಿಎಂ ಮನೆ ಧರಣಿ ಕೂರಬೇಕಾದಿತ್ತು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದರು.

ಸೋಮವಾರ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ತಿಳಿಸಿದ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು ಸಿಎಂ ಕಛೇರಿಯಲ್ಲಿ ಪ್ರವೀಣ್ ಪತ್ನಿಗೆ ಕೆಲಸ ಕೊಡುವುದಾಗಿ ತಿಳಿಸಿದ್ದಾರೆ. ಅದನ್ನು ಕೂಡಲೇ ನೆರವೇರಿಸಬೇಕು. ಹಿಂದೆಯೂ ಇದೇ ರೀತಿಯ ಆಶ್ವಾಸನೆ ನೀಡಿ ಈಡೇರಿಸಿಲ್ಲ. ಅದು ಪರಮೇಶ್ ಮೇಸ್ತಾ, ಶರತ್ ಮಡಿವಾಳ ಅವರಿಗೆ ನೀಡಿದ ಘೋಷಣೆ ಈಡೇರಲಿಲ್ಲ ಎಂದು ಹೇಳಿದ್ದಾರೆ.

ಒಂದು ವೇಳೆ ಮಾತು ತಪ್ಪಿದಲ್ಲಿ ಮುಖ್ಯಮಂತ್ರಿ ಮನೆ ಮುಂದೆ ಸಾವಿರಾರು ಜನ ಸೇರಿಸಿ ಧರಣಿ ಕೂತು, ನಿಮ್ಮ ಮುಖಕ್ಕೆ ಮಸಿ ಬಳಿಯಬೇಕಾದಿತು ಎಂಬ ಎಚ್ಚರಿಕೆಯನ್ನು ಹಿಂದೂ ಮುಖಂಡ, ಶ್ರೀ ರಾಮ ಸೇನೆಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು. ಕೃತ್ಯ ಎಸಗಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅವರಿಗೆ ಎಂದಿಗೂ ಜಾಮೀನು ದೊರೆಯದಂತೆ ನೋಡಿಕೊಳ್ಳಬೇಕು. ಈ ಹಿಂದೆಯೇ ನಾನು ಇಲ್ಲಿಗೆ ಭೇಟಿ ನೀಡುವ ವೇಳೆ ನಿಷೇಧ ಹೇರಿದ್ದನ್ನು ನಾನು ಖಂಡಿಸುತ್ತೇನೆ ಎಂದರು.
