Saturday, June 28, 2025
spot_imgspot_img
spot_imgspot_img

ಭಾರತದಲ್ಲಿರುವ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಬಂಧನ ವಾರೆಂಟ್ ಹೊರಡಿಸಿದ ಬಾಂಗ್ಲಾ ನ್ಯಾಯಾಲಯ

- Advertisement -
- Advertisement -

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್​ ಹಸೀನಾ ವಿರುದ್ಧ ಅಲ್ಲಿನ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ. ಶೇಖ್ ಹಸೀನಾ ಅವರು ಆಗಸ್ಟ್ 5 ರಂದು ದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸಹೋದರಿ ಶೇಖ್ ರೆಹಾನಾ ಅವರೊಂದಿಗೆ ಬಾಂಗ್ಲಾದೇಶವನ್ನು ತೊರೆದು ಭಾರತಕ್ಕೆ ಬಂದಿದ್ದರು.

ಆದರೆ ಇದೀಗ ಶೇಖ್ ಹಸೀನಾರ ಸಂಕಷ್ಟ ಹೆಚ್ಚಿದೆ. ಬಾಂಗ್ಲಾದೇಶದ ನ್ಯಾಯಾಲಯ ಅರೆಸ್ಟ್​ ವಾರೆಂಟ್ ಹೊರಡಿಸಿದೆ. ಬಾಂಗ್ಲಾದೇಶ ನ್ಯಾಯಾಲಯವು ಶೇಖ್ ಹಸೀನಾ ವಿರುದ್ಧ ಅಕ್ಟೋಬರ್ 17 ಗುರುವಾರ ಬಂಧನ ವಾರಂಟ್ ಹೊರಡಿಸಿದೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಕ್ರಿಮಿನಲ್ ಟ್ರಿಬ್ಯೂನಲ್‌ನ ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್ ತಾಜುಲ್ ಇಸ್ಲಾಂ ಈ ಬಂಧನ ವಾರಂಟ್ ಕುರಿತು ಮಾಹಿತಿ ನೀಡಿರುತ್ತಾರೆ.

ಶೇಖ್ ಹಸೀನಾ ವಿರುದ್ಧ ಬಾಂಗ್ಲಾ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದ್ದಲ್ಲದೆ ಮತ್ತೊಂದು ಆದೇಶವನ್ನೂ ಹೊರಡಿಸಿದೆ. ಈ ಆದೇಶದ ಪ್ರಕಾರ ಶೇಖ್ ಹಸೀನಾ ಅವರು ನವೆಂಬರ್ 18ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ವರದಿಯಾಗಿದೆ.

- Advertisement -

Related news

error: Content is protected !!