
ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶಕ್ಕೆ ಪ್ರವೇಶಕ್ಕೆ ಮುನ್ನ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ ಬಂದಿರುವ ಬಗ್ಗೆ ವರದಿಯಾಗಿದೆ. ರಾಹುಲ್ ಗಾಂಧಿ ಅವರಿಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಜುನಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದೋರ್‌ನ ಸಿಹಿತಿಂಡಿ ಅಂಗಡಿಯೊಂದರ ಹೊರಗೆ ರಾಹುಲ್ ಗಾಂಧಿಯನ್ನು ಕೊಲ್ಲುವುದಾಗಿ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ. ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡಲು ಪ್ರಾರಂಭಿಸಿದ್ದಾರೆ ಮತ್ತು ಪತ್ರವನ್ನು ಸಿಹಿತಿಂಡಿ ಅಂಗಡಿಯ ಹೊರಗೆ ಬಿಟ್ಟುಹೋದ ವ್ಯಕ್ತಿಯನ್ನು ಹುಡುಕುತ್ತಿದ್ದಾರೆ.

ಇದೀಗ ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 507 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರು ಸಾವರ್ಕರ್ ಗೆ ಬಗ್ಗೆ ಹೇಳಿಕೆ ಕೊಟ್ಟ ಒಂದು ದಿನದ ನಂತರ ಬೆದರಿಕೆ ಪತ್ರ ಬಂದಿದೆ, ಅವರು ಬ್ರಿಟಿಷ್ ಆಡಳಿತಗಾರರಿಗೆ ಸಹಾಯ ಮಾಡಿದ್ದಾರೆ ಮತ್ತು ಭಯದಿಂದ ಅವರಿಗೆ ಕ್ಷಮಾದಾನ ಅರ್ಜಿಯನ್ನು ಬರೆದಿದ್ದಾರೆ ಎಂದು ಹೇಳಿದ್ದರು.
- ಮಂಗಳೂರು: ಎಕ್ಕೂರು ಹೆದ್ದಾರಿಯಲ್ಲಿ ಟ್ರಕ್ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು!
- ವಿಟ್ಲ ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್ ಇದರ 2026-27 ನೇ ಸಾಲಿನ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ&ಸ್ಥಾಪಕ ದಿನಾಚರಣೆ
- ಬಂಗಾಳದಲ್ಲಿ ಬಿಜೆಪಿ ಸರ್ಕಾರ ಬರ್ತಿದ್ದಂತೆ ಮೋದಿ ಮಾಸ್ಟರ್ ಸ್ಟ್ರೋಕ್! ಮೊದಲ ಬಾರಿಗೆ ಕೋಲ್ಕತ್ತಾದ ರೆಡ್ ರೋಡ್ನಲ್ಲಿ ಯೋಗ ದಿನಾಚರಣೆ
- ಕೇಪು: ಪಟ್ಲ ಫೌಂಡೇಶನ್ ರಿ.ಮಂಗಳೂರು ಪ್ರಾಯೋಜಕತ್ವದಲ್ಲಿ, ಪಟ್ಲ ಫೌಂಡೇಶನ್ ವಿಟ್ಲ ಘಟಕದ ಸಹಯೋಗದೊಂದಿಗೆ 3ನೇ ವರ್ಷದ ಯಕ್ಷಧ್ರುವ ಉಚಿತ ಯಕ್ಷ ಶಿಕ್ಷಣ ಉದ್ಘಾಟನಾ ಸಮಾರಂಭ
- ವಿರಾಜಪೇಟೆ: ಉದ್ಯಮಿ ಮನೆಗೆ ನುಗ್ಗಿ ಗುಂಡು ಹಾರಿಸಿ ಹತ್ಯೆ ಮಾಡುವುದಾಗಿ ಬೆದರಿಕೆ!









