Sunday, July 6, 2025
spot_imgspot_img
spot_imgspot_img

ಭಾರತ- ಪಾಕ್ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಟಿವಿ ಚರ್ಚೆ ನಡೆಸೋಣ; ಪ್ರಧಾನಿ ಮೋದಿಗೆ ಇಮ್ರಾನ್ ಖಾನ್ ಆಹ್ವಾನ

- Advertisement -
- Advertisement -

ನವದೆಹಲಿ: ಶತ್ರು ರಾಷ್ಟ್ರಗಳೆಂದೇ ಪರಿಗಣಿಸಲಾಗುವ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಟಿವಿ ಚರ್ಚೆಯಲ್ಲಿ ಭಾಗಿಯಾಗಲು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ನರೇಂದ್ರ ಮೋದಿಯವರನ್ನು ಆಹ್ವಾನಿಸಿದ್ದಾರೆ. ಎರಡು ನೆರೆಯ ರಾಷ್ಟ್ರಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ತಾವು ಟಿವಿ ಚರ್ಚೆ ನಡೆಸಲು ಬಯಸುವುದಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಮಾಸ್ಕೋಗೆ ಮೊದಲ ಬಾರಿಗೆ ಎರಡು ದಿನಗಳ ಭೇಟಿ ನೀಡಲಿರುವ ಇಮ್ರಾನ್ ಖಾನ್ ಅದಕ್ಕೂ ಮೊದಲು ರಷ್ಯಾದ ಸರ್ಕಾರಿ ದೂರದರ್ಶನ ನೆಟ್‌ವರ್ಕ್ ಆರ್‌ಟಿಗೆ ನೀಡಿದ ಸಂದರ್ಶನದಲ್ಲಿ ಖಾನ್ ಈ ಹೇಳಿಕೆ ನೀಡಿದ್ದಾರೆ. ” ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಟಿವಿಯಲ್ಲಿ ಚರ್ಚೆ ಮಾಡಲು ನಾನು ಇಷ್ಟಪಡುತ್ತೇನೆ” ಎಂದು ಪ್ರಶ್ನೆಯೊಂದಕ್ಕೆ ಇಮ್ರಾನ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಪಾಕಿಸ್ತಾನ ಮತ್ತು ಭಾರತದ ನಡುವಿನ ಭಿನ್ನಾಭಿಪ್ರಾಯಗಳನ್ನು ಚರ್ಚೆಯ ಮೂಲಕ ಪರಿಹರಿಸಿದರೆ ಒಂದು ಶತಕೋಟಿ ಜನರಿಗೆ ತುಂಬಾ ಒಳ್ಳೆಯದಾಗಲಿದೆ ಎಂದು ಅವರು ಹೇಳಿದ್ದಾರೆ.

vtv vitla
vtv vitla

ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಇಮ್ರಾನ್ ಖಾನ್, 2018ರಲ್ಲಿ ತಮ್ಮ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಅಧಿಕಾರಕ್ಕೆ ಬಂದಾಗ ನಾನು ತಕ್ಷಣವೇ ಭಾರತವನ್ನು ಸಂಪರ್ಕಿಸಿದೆ. ಭಾರತದ ನಾಯಕರು ಮೇಜಿನ ಎದುರು ನಮ್ಮೊಂದಿಗೆ ಮುಖಾಮುಖಿಯಾಗಿ ಕುಳಿತು ಕಾಶ್ಮೀರದ ಸಮಸ್ಯೆಯನ್ನು ಪರಿಹರಿಸುವಂತೆ ಮನವಿ ಮಾಡಿದ್ದೆ. ಆದರೆ, ನನ್ನ ಮಾತಿಗೆ ಭಾರತ ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

2016ರಲ್ಲಿ ನೆರೆಯ ದೇಶದಲ್ಲಿರುವ ಭಯೋತ್ಪಾದಕ ಗುಂಪುಗಳು ಪಠಾಣ್‌ಕೋಟ್ ವಾಯುನೆಲೆಯ ಮೇಲೆ ನಡೆಸಿದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಇನ್ನಷ್ಟು ಹದಗೆಟ್ಟಿದೆ. ಉರಿಯಲ್ಲಿನ ಭಾರತೀಯ ಸೇನಾ ಶಿಬಿರದ ಮೇಲಿನ ದಾಳಿ ಸೇರಿದಂತೆ ನಂತರದ ದಾಳಿಗಳು ಸಂಬಂಧವನ್ನು ಇನ್ನಷ್ಟು ಹದಗೆಡಿಸಿವೆ. ಫೆಬ್ರವರಿ 26, 2019ರಂದು 40 ಸಿಆರ್‌ಪಿಎಫ್ ಜವಾನರನ್ನು ಹತ್ಯೆಗೈದ ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತದ ಯುದ್ಧ ವಿಮಾನಗಳು ಪಾಕಿಸ್ತಾನದೊಳಗೆ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ತರಬೇತಿ ಶಿಬಿರವನ್ನು ಹೊಡೆದುರುಳಿಸಿದ ನಂತರ ಎರಡೂ ರಾಷ್ಟ್ರಗಳ ನಡುವಿನ ಸಂಬಂಧವು ಮತ್ತಷ್ಟು ಕುಸಿದಿದೆ.

2019ರ ಆಗಸ್ಟ್​​ನಲ್ಲಿ ಭಾರತವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಅಧಿಕಾರವನ್ನು ಹಿಂತೆಗೆದುಕೊಳ್ಳುವುದಾಗಿ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುತ್ತದೆ ಎಂದು ಘೋಷಿಸಿದ ನಂತರ ಸಂಬಂಧಗಳು ಹದಗೆಟ್ಟವು. ಜಮ್ಮು ಮತ್ತು ಕಾಶ್ಮೀರವು ಎಂದೆಂದಿಗೂ ದೇಶದ ಅವಿಭಾಜ್ಯ ಅಂಗವಾಗಿ ಉಳಿಯುತ್ತದೆ ಎಂದು ಭಾರತವು ಪಾಕಿಸ್ತಾನಕ್ಕೆ ಪದೇ ಪದೇ ಹೇಳುತ್ತಿದೆ. ವಾಸ್ತವವನ್ನು ಒಪ್ಪಿಕೊಂಡು ಭಾರತ ವಿರೋಧಿ ಪ್ರಚಾರವನ್ನು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಸಲಹೆ ನೀಡಿದೆ.

ಭಯೋತ್ಪಾದನೆ, ಹಗೆತನ ಮತ್ತು ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಇಸ್ಲಾಮಾಬಾದ್‌ನೊಂದಿಗೆ ಸಾಮಾನ್ಯ ನೆರೆಯ ಸಂಬಂಧಗಳನ್ನು ಬಯಸುವುದಾಗಿ ಭಾರತ ಪಾಕಿಸ್ತಾನಕ್ಕೆ ತಿಳಿಸಿದೆ.

- Advertisement -

Related news

error: Content is protected !!