Friday, May 20, 2022
spot_imgspot_img
spot_imgspot_img

ಭೀಕರ ರಸ್ತೆ ಅಪಘಾತ; ‘ನನ್ನಮ್ಮ ಸೂಪರ್ ಸ್ಟಾರ್’ ಸ್ಪರ್ಧಿ 6 ವರ್ಷದ ಸಮನ್ವಿ ಸ್ಥಳದಲ್ಲೇ ಮೃತ್ಯು; ತಾಯಿ ಆಸ್ಪತ್ರೆಗೆ ದಾಖಲು..!

- Advertisement -
suvarna gold
. nñ
- Advertisement -

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಇತ್ತೀಚೆಗಷ್ಟೇ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿಶೋ ಆರಂಭಗೊಂಡಿದೆ. ಈ ಕಾರ್ಯಕ್ರಮಕ್ಕೆ 6 ವರ್ಷದ ಸಮನ್ವಿ ಸ್ಪರ್ಧಿಯಾಗಿ ತೆರಳಿದ್ದಳು. ನಿನ್ನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಮನ್ವಿ ಮೃತಪಟ್ಟಿದ್ದಾಳೆ. ಇದು ಅವಳ ಅಭಿಮಾನಿಗಳಿಗೆ ದುಃಖ ತಂದಿದೆ. ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡುರ ಮೊಮ್ಮಗಳು ಸಮನ್ವಿ. ತಾಯಿ ಅಮೃತಾ ಜತೆ ಅವರು ಈ ರಿಯಾಲಿಟಿಶೋಗೆ ಬಂದಿದ್ದರು.

ನಿನ್ನೆ ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ಮೇಲೆ ಸಮನ್ವಿ ಹಾಗೂ ಅಮೃತಾ ತೆರಳುತ್ತಿದ್ದರು. ಈ ವೇಳೆ ಸ್ಕೂಟರ್​ಗೆ ಹಿಂದಿನಿಂದ ಲಾರಿ ಬಂದು ಹೊಡೆದಿದೆ. ಸ್ಥಳದಲ್ಲೇ ಸಮನ್ವಿ ಮೃತಪಟ್ಟಿದ್ದಾಳೆ. ಅಮೃತಾ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಅಮೃತಾ ನಾಯ್ಡು ನಾಲ್ಕು ತಿಂಗಳ ಗರ್ಭಿಣಿ. ಅವರ ಪತಿ ರೂಪೇಶ್ ನಾಯ್ಡು ಅವರು ಖಾಸಗಿ ಕಂಪೆನಿ ಉದ್ಯೋಗಿ ಆಗಿದ್ದಾರೆ. ಇಂದು ಸಂಜೆ ಶಾಪಿಂಗ್​​ಗಾಗಿ ಅಮೃತಾ ಹಾಗೂ ಸಮನ್ವಿ ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಸಮನ್ವಿಗೆ ಶಾಲೆಗೆ ಹೋಗಲು ಅನುಕೂಲವಾಗಲೆಂದು ವಿಲ್ಸನ್ ಗಾರ್ಡನ್​ನಿಂದ ಕನಕಪುರ ರಸ್ತೆಗೆ ಇವರು ಶಿಫ್ಟ್​ ಆಗಿದ್ದರು.

vtv vitla
vtv vitla

ಶೋಗೆ ಬರುವುದಕ್ಕೂ ಮೊದಲು ಮಾತನಾಡಿದ್ದ ಸಮನ್ವಿ, ‘ನನಗೆ ಅಮ್ಮ ಎಂದರೆ ತುಂಬಾನೇ ಅಚ್ಚುಮೆಚ್ಚು. ನಾನು ಅವಳನ್ನು ಜಾಸ್ತಿ ಪ್ರೀತಿ ಮಾಡುತ್ತೇನೆ. ಪಾರ್ಟಿಗೆ ಹೋಗ್ತಾರೆ. ಅಪ್ಪನ ಜತೆ ಹಣ ಶೇರ್​ ಮಾಡ್ತಾರೆ. ಈ ಕಾರಣಕ್ಕೆ ನನಗೆ ಅವಳು ಹೆಚ್ಚು ಇಷ್ಟ’ ಎಂದು ಹೇಳಿಕೊಂಡಿದ್ದಳು. ಈಗ ಉಜ್ವಲ ಭವಿಷ್ಯ ಕಾಣಬೇಕಿದ್ದ ಅವಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು ನಿಜಕ್ಕೂ ದುಃಖದ ಸಂಗತಿ.

‘ನನ್ನಮ್ಮ ಸೂಪರ್​ ಸ್ಟಾರ್​’ ಕಾರ್ಯಕ್ರಮಕ್ಕೆ ವೀಕ್ಷಕರು ಮನ ಸೋತಿದ್ದಾರೆ. ಕಿರುತೆರೆ ಕ್ಷೇತ್ರದಲ್ಲಿ ಜನಪ್ರಿಯತೆ ಪಡೆದ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಈ ಶೋನಲ್ಲಿ ಭಾಗವಹಿಸುತ್ತಿದ್ದಾರೆ. ಖ್ಯಾತ ನಿರೂಪಕ ಸೃಜನ್​ ಲೋಕೇಶ್​, ನಟಿಯರಾದ ಅನುಪ್ರಭಾಕರ್​ ಮತ್ತು ತಾರಾ ಅನುರಾಧಾ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ಪುಟಾಣಿಗಳ ಕಲರವದಿಂದ ವೀಕ್ಷಕರಿಗೆ ಮಸ್ತ್​ ಮನರಂಜನೆ ಸಿಗುತ್ತಿದೆ. ಅನುಪಮಾ ಗೌಡ ಅವರು ನಿರೂಪಣೆ ಮಾಡುತ್ತಿದ್ದಾರೆ.

vtv vitla
vtv vitla
- Advertisement -

Related news

error: Content is protected !!