- Advertisement -
- Advertisement -

ಮಂಗಳೂರು: ಇಲ್ಲಿನ ಬೈಕಂಪಾಡಿ ಜಂಕ್ಷನ್ ಬಳಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಯುವಕನೊಬ್ಬನನ್ನು ಹತ್ಯೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ರವಿರಾಜ್ ಬಂಗೇರ ಎಂಬವರ ಮೇಲೆ ಇಬ್ಬರು ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಗಂಭೀರ ಸ್ಥಿತಿಯಲ್ಲಿದ್ದ ರವಿರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಮುಂದುವರೆಸಿದ್ದಾರೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


- Advertisement -








