Friday, September 4, 2026
spot_imgspot_img
spot_imgspot_img

ಮಂಗಳೂರು : ಕಾರು ಮತ್ತು ಬೈಕ್ ಢಿಕ್ಕಿ; ಅಪಘಾತದಲ್ಲಿ ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷ ಮೃತ್ಯು..!!

- Advertisement -
- Advertisement -

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಸುರತ್ಕಲ್‌ ಆ್ಯಕ್ಸಿಸ್‌ ಬ್ಯಾಂಕ್‌ ಮುಂಭಾಗದ ಹೆದ್ದಾರಿಯಲ್ಲಿ ರವಿವಾರ ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರು‌ ಸಾವನ್ನಪ್ಪಿದ ಘಟನೆ ನಡೆದಿದೆ.

ಸುರತ್ಕಲ್‌ ಲಯನ್ಸ್‌ ಕ್ಲಬ್‌ ಅಧ್ಯಕ್ಷ ರಮೇಶ್‌ ಕುಮಾರ್‌(68) ಮೃತಪಟ್ಟವರು‌ ಎಂದು ತಿಳಿದು ಬಂದಿದೆ.

ಸುರತ್ಕಲ್‌ ಜಂಕ್ಷನ್‌ನಲ್ಲಿ ಇಡ್ಯಾ ಕಡೆ ಹೋಗುವ ಸಂದರ್ಭ ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆಯಿತು. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಲಯನ್ಸ್‌ ಸೇವಾ ಟ್ರಸ್ಟ್‌ ಕಾರ್ಯದರ್ಶಿಯಾಗಿದ್ದರು. ಧೀರ್ಘ‌ ಕಾಲದಿಂದ ಎಲ್‌ಐಸಿ ಏಜಂಟ್‌ ಆಗಿ, ಸಾಮಾಜಿಕವಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸುರತ್ಕಲ್‌ ಇಡ್ಯಾ ಬಿಲ್ಲವ ಸಂಘದ ಕೋಶಾಧಿಕಾರಿಯಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದ ಅವರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ. ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಯಲಾಗಿದೆ.

- Advertisement -

Related news

error: Content is protected !!