Wednesday, July 2, 2025
spot_imgspot_img
spot_imgspot_img

ಮಂಗಳೂರು: ಗುದನಾಳದಲ್ಲಿರಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನ ಸಾಗಾಣಿಕೆ ಪತ್ತೆ; ಆರೋಪಿಯ ಬಂಧನ…!

- Advertisement -
- Advertisement -

ಮಂಗಳೂರು: ಚಿನ್ನವನ್ನು ಗುದನಾಳದಲ್ಲಿ ಅಡಗಿಸಿ ಕಳ್ಳಸಾಗಾಣಿಕೆ ಮಾಡಲು ಯತ್ನಿಸಿ ವ್ಯಕ್ತಿಯನ್ನು ಭಾನುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಜೂ. 26 ರ ಭಾನುವಾರ ದುಬೈನಿಂದ ಇಂಡಿಗೋ ವಿಮಾನದ ಮೂಲಕ ಬಂದಿಳಿದಿದ್ದು, ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ 60,24,340 ರೂ. ಮೌಲ್ಯದ 1163 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಕಾಸರಗೋಡು ಮೂಲದ ಪ್ರಯಾಣಿಕ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಕ್ಯಾಪ್ಸುಲ್ ತುಂಬಿ ಗುದನಾಳದಲ್ಲಿ ಅಡಗಿಸಿ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!