- Advertisement -



- Advertisement -
ಕಂದಾವರ: ಗ್ರಾಮಪಂಚಾಯತ್ ಅಧ್ಯಕ್ಷ ಪಿಡಿಒ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕಂದಾವರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆದಿದೆ.

ಗ್ರಾಪಂ ಅಧ್ಯಕ್ಷ ಉಮೇಶ್ ಮೂಲ್ಯ, ಪಿಡಿಒ ಯಶವಂತ ಬೆಳ್ಚಡರವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕಂದಾವರ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರು ಮಾಡುವ ನಿರ್ಣಯದ ವಿರುದ್ಧವಾಗಿ ಕೆಲಸ ಮಾಡುತ್ತಾರೆ ಎಂದು ಪಿಡಿಒ ವಿರುದ್ಧ ಅಧ್ಯಕ್ಷರು ಹರಿಹಾಯ್ದಿದ್ದರು. ಕಾನೂನು ಮೀರಿ ಕೆಲಸ ಮಾಡಲು ಅಸಾಧ್ಯ ಎಂದು ಪಿಡಿಒ ಹೇಳಿದ್ದರು. ಇದರಿಂದ ಮಾತಿನ ಚಕಮಕಿ ನಡೆದು ಹೊಡೆದಾಡಿಕೊಂಡಿದ್ದಾರೆ.

ಹಲ್ಲೆಗೊಳಗಾದ ಪಿಡಿಒ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.



- Advertisement -