Monday, June 30, 2025
spot_imgspot_img
spot_imgspot_img

ಮಂಗಳೂರು: ಜ್ಯೂಸ್’ನಲ್ಲಿ ನಿದ್ದೆ ಬರುವ ಮದ್ದು ಬೆರೆಸಿ ರೌಡಿಶೀಟರ್’ನಿಂದ ಬಾಲಕಿಯ ಅತ್ಯಾಚಾರ

- Advertisement -
- Advertisement -

ಮಂಗಳೂರು: 16 ವರ್ಷದ ಬಾಲಕಿ ಮೇಲೆ ರೌಡಿಶೀಟರ್ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೈಕಂಬದ ಹೊಟೇಲ್ ಒಂದರಲ್ಲಿ ಬಾಣಸಿಗನಾಗಿ ಕಾರ್ಯ ನಿರ್ವಹಿಸುತ್ತಿದ್ದ ರೌಡಿಶೀಟರ್ ನವೀನ್ ಸಿಕ್ವೇರ ಎಂದು ಗುರುತಿಸಲಾಗಿದೆ.

ಬಾಲಕಿ ಸಹೋದರನ ಪರಿಚಯದ ಹಿನ್ನೆಲೆ ಬಾಲಕಿಯ ಫೋನ್ ನಂಬರ್ ಪಡೆದಿದ್ದ ರೌಡಿಶೀಟರ್ ಆಕೆ ಮನೆಯಲ್ಲಿ ಒಬ್ಬಳೇ ಇರುವ ವೇಳೆ ಮನೆಗೆ ಬಂದು ಬಾಲಕಿಗೆ ಜ್ಯೂಸ್ ನಲ್ಲಿ ನಿದ್ದೆ ಬರುವ ಮದ್ದು ಬೆರೆಸಿ ಅತ್ಯಾಚಾರ ಮಾಡಿದ್ದ ಎನ್ನಲಾಗಿದೆ. ಇನ್ನು ಅತ್ಯಾಚಾರ ವೆಗೆಸಿ ಆರೋಪಿಯು ಉಡುಪಿ ಬಾರ್ ಒಂದಕ್ಕೆ ಹೋಗಿ ಕೆಲಸ ಕೇಳಿದ್ದು, ಉಡುಪಿ ಬಾರ್ ನಿಂದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮೇಲೆ ಉಳ್ಳಾಲ ಠಾಣೆಯಲ್ಲಿ ರೌಡಿಶೀಟರ್, ಗುಂಪು ಘರ್ಷಣೆ, ಸರಗಳ್ಳತನ ಸೇರಿ ಹಲವು ಪ್ರಕರಣಗಳು ದಾಖಲಾಗಿದೆ. ಮಂಗಳೂರಿನ ಮಹಿಳಾ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!