- Advertisement -




- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರ ಮೊಬೈಲ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ನಡೆದಿದ್ದು ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಮಧ್ಯಾಹ್ನ ತಮ್ಮ ಕಚೇರಿಯಲ್ಲಿ ಚುನಾವಣಾ ವೀಕ್ಷಕರೊಂದಿಗೆ ಸಭೆ ನಡೆಸುತ್ತಿದ್ದ ವೇಳೆ ಅವರ ಮೊಬೈಲ್ ಗೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಬಂದಿದೆ. ಕರೆ ಸ್ವೀಕರಿಸಿದ ಜಿಲ್ಲಾಧಿಕಾರಿಗೆ ಅಪರಿಚಿತ ವ್ಯಕ್ತಿಯು ಅವಾಚ್ಯವಾಗಿ ನಿಂದಿಸಿದ್ದಾನೆ ಜೊತೆಗೆ ಓರ್ವ ಕೆಎಂಎಫ್ ಸಿಬ್ಬಂದಿಯನ್ನು ಮಂಗಳೂರಿನಿಂದ ತುಮಕೂರಿಗೆ ಕಳುಹಿಸಿಕೊಡಬೇಕು ಎಂದು ಬೇಡಿಕೆ ಇಟ್ಟು ಜೀವಬೆದರಿಕೆ ಹಾಕಿದ್ದಾನೆ ಎಂದು ತಿಳಿದು ಬಂದಿದೆ.
ಈ ಕುರಿತು ಜಿಲ್ಲಾಧಿಕಾರಿಯವರು ಪೊಲೀಸ್ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -