- Advertisement -
- Advertisement -

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ ಪೊಲೀಸ್ ಇಲಾಖೆ ಜಾರಿಗೆ ತರಲಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿರಿಗೆ ಅವಕಾಶವಿಲ್ಲ ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ.

ಹದಿನೆಂಟು ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಈ ನಿಯಮದಿಂದ ರಿಯಾಯಿತಿ ನೀಡಲಾಗಿದೆ. ಕೇವಲ ಪುರುಷ ಹಿಂಬದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಕೆಲವು ಬಾರಿ ಹಿಂಬದಿ ಸವಾರರು ಸಮಸ್ಯೆ ಉಂಟು ಮಾಡ್ತಾರೆ. ಬೇರೆ ರಾಜ್ಯದಲ್ಲೂ ಈ ನಿಯಮ ಜಾರಿಗೆ ತರಲಾಗಿತ್ತು. ಆಗ ಎಲ್ಲಾ ಪುರಷ ಹಿಂಬದಿ ಸವಾರರಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸಲು ಅವಕಾಶ ನಿರಾಕರಿಸಲಾಗಿತ್ತು ಇಲ್ಲಿ ಮಹಿಳೆಯರು, ಹಿರಿಯ ನಾಗರಿಕರು,ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

- ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ; ಸ್ವಾಧೀನಪಡಿಸಿಕೊಂಡ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಬಿಡುಗಡೆ
- ಶಾಸಕ ಅಶೋಕ್ ರೈ ನೇತೃತ್ವದಲ್ಲಿ ವಿಟ್ಲ ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ
- ಬೆಳ್ತಂಗಡಿ: ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಪೊಲೀಸ್ ದಾಳಿ; ಇಬ್ಬರ ವಿರುದ್ಧ ಪ್ರಕರಣ ದಾಖಲು..!
- ಮರಕ್ಕೆ ನೇಣು ಬಿಗಿದು ಯುವಕ ಆತ್ಮಹತ್ಯೆ..!
- ಬಂಟ್ವಾಳ: ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು..!

- Advertisement -