- Advertisement -
- Advertisement -

ಮಂಗಳೂರು: ದುಬೈನಿಂದ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿ ಪೊಲೀಸ್ ಬಲೆಗೆ ಬಿದ್ದಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಚಿನ್ನವನ್ನು ಚಪ್ಪಲಿಯೊಳಗಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ದುಬೈನಿಂದ ಬಂದಿಳಿದ ಕಾಸರಗೋಡಿನ ಪ್ರಯಾಣಿಕನನ್ನು ತಪಾಸಣೆ ಮಾಡಿದಾಗ 17.43 ಲ.ರೂ. ಮೌಲ್ಯದ 24 ಕ್ಯಾರೆಟ್‌ನ 332 ಗ್ರಾಂ ಚಿನ್ನವನ್ನು ತಾನು ಧರಿಸಿದ್ದ ಚಪ್ಪಲಿಯ ಒಳಭಾಗದಲ್ಲಿ ಅಂಟಿನ ಮಿಶ್ರಣದೊಂದಿಗೆ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


- Advertisement -