Tuesday, December 3, 2024
spot_imgspot_img
spot_imgspot_img

ಮಂಗಳೂರು : ನವಜಾತ ಶಿಶುವನ್ನು ಬಸ್‌ ನಿಲ್ದಾಣದಲ್ಲಿ ಬಿಟ್ಟು ಹೋದ ಪೋಷಕರು

- Advertisement -
- Advertisement -
vtv vitla

ಮಂಗಳೂರು : ನವಜಾತ ಶಿಶುವನ್ನು ಹೆತ್ತವರು ರಸ್ತೆಯಲ್ಲೇ ಬಿಟ್ಟು ಹೋದ ಘಟನೆ ಸ್ಟೇಟ್‌ಬ್ಯಾಂಕ್‌ ಸಮೀಪದ ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಮಗುವನ್ನು ವೆನ್ಲಾಕ್‌ನ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಂಡು ಮಗು ಇದಾಗಿದ್ದು, ಜನಿಸಿ ಸುಮಾರು 1 ವಾರ ಕಾಲ ಆಗಿದೆ ಎಂದು ಹೇಳಲಾಗಿದ್ದು, ಲೈಟ್ ಕಂಬದ ಬುಡದಲ್ಲಿ ಮಗು ಇರುವುದನ್ನು ನೋಡಿದ ಬಸ್ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಗು ಪತ್ತೆಯಾದ ಮಾಹಿತಿ ತಿಳಿಯುತ್ತಿದ್ದಂತೆ ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಗುವನ್ನು ಲೇಡಿಗೋಷನ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ತಪಾಸಣೆ ನಡೆಸಿ ವೆನ್ಲಾಕ್‌ ಗೆ ದಾಖಲಿಸಲಾಗಿದೆ. ಮಗುವಿನ ಆರೋಗ್ಯ ಸ್ಥಿರವಾಗಿರದ ಕಾರಣ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆತ್ತವರು ಬಿಟ್ಟು ಹೋಗಿರುವ ಮಗುವಿನ ಆರೋಗ್ಯದಲ್ಲಿ ಏರುಪೇರು ಇದ್ದು, ತಲೆಯಲ್ಲಿ ಸಣ್ಣ ಪುಟ್ಟ ಗಾಯಗಳಿವೆ. ಪತ್ತೆಯಾದ ವೇಳೆ ಮೂಗಿಗೆ ಟ್ಯೂಬ್‌ ಹಾಕಿದ ಸ್ಥಿತಿಯಲ್ಲಿತ್ತು. ಫಿಟ್ಸ್‌ ಕೂಡಾ ಇರುವುದು ತಿಳಿದು ಬಂದಿದೆ. ಮಧ್ಯಾಹ್ನದ ವೇಳೆ ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ಒಬ್ಬ ಗಂಡಸು ಹಾಗೂ ಹೆಂಗಸಿನೊಂದಿಗೆ ಈ ಮಗುವನ್ನು ಸ್ಥಳೀಯರು ನೋಡಿದ್ದು ಮಗುವನ್ನು ಯಾರು ಬಿಟ್ಟು ಹೋಗಿದ್ದಾರೆ ಎನ್ನುವ ಕುರಿತಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ

- Advertisement -

Related news

error: Content is protected !!