Wednesday, September 23, 2026
spot_imgspot_img
spot_imgspot_img

ಮಂಗಳೂರು: ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಿಂದ ಬಿದ್ದು ಬಂಟ್ವಾಳದ ಯುವಕ ಮೃತ್ಯು

- Advertisement -
- Advertisement -

ಮಂಗಳೂರು: ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಗರದ ಪಡೀಲ್ ಬಳಿ ನಡೆದಿದೆ.

ವಿಜಯ್ (22)

ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ನಿವಾಸಿ ವಿಜಯ್ (22) ಮೃತ ದುರ್ದೈವಿ. ಫ್ಯಾಬ್ರಿಕೇಶನ್ ಕೆಲಸ ಮಾಡುತ್ತಿದ್ದ ವಿಜಯ್ 4ನೇ ಮಹಡಿಯಿಂದ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!