Monday, June 30, 2025
spot_imgspot_img
spot_imgspot_img

ಮಂಗಳೂರು: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಹಿನ್ನೆಲೆ; ಮೇ 21 ಹಾಗೂ 22ರಂದು ನಿಷೇಧಾಜ್ಞೆ ಜಾರಿ

- Advertisement -
- Advertisement -

ಮಂಗಳೂರು: ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪರೀಕ್ಷಾ ಕೇಂದ್ರಗಳಲ್ಲಿ 2022ರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆ ಮೇ 21 ಹಾಗೂ 22ರಂದು ಪರೀಕ್ಷೆ ನಡೆಯುವ ಸಂದರ್ಭ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮೇ 21 ಹಾಗೂ 22ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಪರೀಕ್ಷಾ ಕೇಂದ್ರದ 200 ಮೀಟರ್ ಅಂತರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿ.ಆರ್.ಪಿ.ಸಿ 144ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಅವರ ಕಚೇರಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!