- Advertisement -
- Advertisement -



ಮಂಗಳೂರಿನ ಸುರತ್ಕಲ್‌ನಲ್ಲಿ ಮಂಗಳಪೇಟೆಯ ಯುವಕ ಫಾಝಿಲ್ ಹತ್ಯೆಗೆ ಬಳಸಿದ್ದ ಎಂದು ಎನ್ನಲಾಗುತ್ತಿರುವ ಬಿಳಿ ಬಣ್ಣದ ಇಯಾನ್ ಕಾರೊಂದು ಪಡುಬಿದ್ರೆಯ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿಪತ್ತೆಯಾಗಿದೆ. ನಿರ್ಜನ ಪ್ರದೇಶದಲ್ಲಿ ಕಾರು ಕಂಡು ಬಂದ ಹಿನ್ನಲೆ ಈ ಬಗ್ಗೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆದರೆ ಇದೇ ಕಾರು ಫಾಝಿಲ್ ಹತ್ಯೆಗೆ ಬಳಸಲಾಗಿತ್ತು ಎಂದು ಪೊಲೀಸ್ ಇಲಾಖೆ ಅಧೀಕೃತವಾಗಿ ಮಾಹಿತಿ ನೀಡಿಲ್ಲ.

ಸ್ಥಳೀಯರು ಉಡುಪಿ ಜಿಲ್ಲಾ ಪೋಲಿಸರಿಗೆ ಅಪರಿಚಿತ ಕಾರು ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳು ಕಾರನ್ನು ಸುರತ್ಕಲ್‌ನಿಂದ ಪಡುಬಿದ್ರೆಯ ಇನ್ನಾಕ್ಕೆ ಆಗಮಿಸಿ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ.
ಇದಕ್ಕೂ ಮೊದಲು ಕಾರಿನ ಮಾಲಕನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನಷ್ಟು ವಿಚಾರಣೆಗಾಗಿ ನ್ಯಾಯಾಲಯವು ಆತನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ತಿಳಿದು ಬಂದಿದೆ.

- Advertisement -