- Advertisement -
- Advertisement -
ಮಂಗಳೂರು: ಸುರತ್ಕಲ್ ನಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ವ್ಯಾಪ್ತಿಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಜಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸುರತ್ಕಲ್, ಪೆಣಂಬೂರು, ಬಜ್ಜೆ, ಮುಲ್ಕಿಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇನ್ನು ಸುರತ್ಕಲ್, ಮುಲ್ಕಿ, ಪಣಂಬೂರು ಮತ್ತು ಬಜಪೆ ಠಾಣಾ ವ್ಯಾಪ್ತಿಗಳಲ್ಲಿಈಗಾಗಲೇ ಶನಿವಾರದವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

- Advertisement -








