Friday, June 5, 2026
spot_imgspot_img
spot_imgspot_img

ಮಂಗಳೂರು: ರೈಲು ಬೋಗಿಯ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ..!

- Advertisement -
- Advertisement -

ಮಂಗಳೂರು: ರೈಲಿನ ಬೋಗಿಯ ಶೌಚಾಲಯದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ರೈಲಿನ ಡಿ3 ಬೋಗಿಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿರುವ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಮೃತ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದು, 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದಾರೆ. ಸಿಮೆಂಟ್‌ ಬಣ್ಣದ ಜರ್ಸಿ, ಕೇಸರಿ ಬಣ್ಣದ ಟಿ-ಶರ್ಟ್‌ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ ಅದರೊಳಗೆ ಕಪ್ಪು ಬಣ್ಣದ ಮಾಸಲು ಪ್ಯಾಂಟ್‌ ಧರಿಸಿದ್ದು, ಕುತ್ತಿಗೆಯಲ್ಲಿ ಮಣಿ ಸರವಿದೆ. ಈ ಕುರಿತು ಮಂಗಳೂರು ರೈಲ್ವೇ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಸುದಾರರು ಇದ್ದಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

- Advertisement -

Related news

error: Content is protected !!