- Advertisement -
- Advertisement -


ಮಂಗಳೂರು: ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ತಪಾಸಣೆಯ ವೇಳೆ ಕಸ್ಟಮ್ಸ್ ಅಧಿಕಾರಿಗಳು ಸುಮಾರು 18,80,000 ರೂ. ಮೌಲ್ಯದ ಯುಎಸ್ ಡಾಲರ್ ವಶಪಡಿಸಿಕೊಂಡಿದ್ದಾರೆ. ಆರೋಪಿಯು ಸ್ಪೈಸ್ ಜೆಟ್ ವಿಮಾನದಲ್ಲಿ ದುಬೈಗೆ ಪ್ರಯಾಣ ಬೆಳೆಸಲು ಸಿದ್ಧತೆ ನಡೆಸುತ್ತಿದ್ದ. ತಪಾಸಣೆಯ ವೇಳೆ ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


- Advertisement -