Sunday, October 6, 2024
spot_imgspot_img
spot_imgspot_img

ಮಂಗಳೂರು: ವಿಧಾನ ಪರಿಷತ್‌ ಉಪಚುನಾವಣೆ : ಬಿಜೆಪಿ ಪಾಲಿಗೆ ಗೆಲವು ನಿಶ್ಚಿತ – ನಳಿನ್‌ಕುಮಾರ್ ಕಟೀಲ್ ವಿಶ್ವಾಸ

- Advertisement -
- Advertisement -

ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಯುವ ನಾಯಕ ಕಿಶೋರ್ ಕುಮಾರ್ ಪುತ್ತೂರು ಸ್ಪರ್ಧಿಸಲಿದ್ದಾರೆ. ಚುನಾಯಿತ ಪ್ರತಿನಿಧಿಗಳು ಕಿಶೋರ್ ಕುಮಾರ್ ರವರ ಅಭೂತಪೂರ್ವ ಗೆಲುವಿಗೆ ಸಹಕರಿಸಬೇಕೆಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ವಿನಂತಿಸಿದ್ದಾರೆ.

ಪಕ್ಷ ಯುವಕರಿಗೆ ಪ್ರಾಮುಖ್ಯತೆ ನೀಡಿದ್ದು, ಆರ್‌ಎಸ್‌ಎಸ್ ಸ್ವಯಂಸೇವಕ ಕಿಶೋರ್ ಕುಮಾರ್ ಪುತ್ತೂರು ಅವರು ಅ.ಭಾ.ವಿ.ಪ ನಾಯಕನಾಗಿ, ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಬಿಜೆಪಿಯ ರಾಜ್ಯ, ರಾಷ್ಟ್ರ ಮಟ್ಟದ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡವರು.

ದ.ಕ.ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಬಿಜೆಪಿ ಪ್ರಾಬಲ್ಯವಿದ್ದು, ಕಿಶೋರ್ ಕುಮಾರ್ ಅವರು ಅತ್ಯಧಿಕ ಮತಗಳಿಂದ ಜಯ ಸಾಧಿಸುವುದು ಖಂಡಿತ ಎಂದು ನಳಿನ್‌ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!