- Advertisement -
- Advertisement -


ಮಂಗಳೂರು: ಶಾರ್ಜಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರೊಬ್ಬರಿಂದ ಅಕ್ರಮವಾಗಿ ಸಾಗಿಸುತ್ತಿದ್ದ 16,79,860 ರೂಪಾಯಿ ಮೌಲ್ಯದ 338 ಗ್ರಾಂ ಚಿನ್ನಾಭರಣವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಬಂಧಿತ ವ್ಯಕ್ತಿ ಕೇರಳದ ಕಾಸರಗೋಡು ನಿವಾಸಿಯಾಗಿದ್ದಾನೆ. ಆರೋಪಿಯು ಸ್ಟೀರಿಯೋ ಕೇಬಲ್, ಬರ್ನರ್ ಸ್ಟ್ಯಾಂಡ್, ಕ್ಯಾಂಡಲ್ ಹೋಲ್ಡರ್ ಸ್ಟ್ಯಾಂಡ್‌ಗಳಲ್ಲಿ ಅಡಗಿಸಿಟ್ಟು ಚಿನ್ನಸಾಗಾಟ ಮಾಡುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.



- Advertisement -