Tuesday, December 3, 2024
spot_imgspot_img
spot_imgspot_img

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ; ಲಕ್ಷಾಂತರ ರೂ. ಮೌಲ್ಯದ ಚಿನ್ನ ಸಹಿತ ಆರೋಪಿ ವಶಕ್ಕೆ..!

- Advertisement -
- Advertisement -

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಯತ್ನ ನಡೆದಿದ್ದು, ಕಾರ್ಯಾಚರಣೆಯ ಮೂಲಕ ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ.

ಕಾಸರಗೋಡು ಮೂಲದ ವ್ಯಕ್ತಿ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿದ್ದ. ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ. 24 ಕ್ಯಾರೆಟ್ ನ 602.200 ಗ್ರಾಂ ತೂಕದ 31,31,440 ಮೌಲ್ಯದ ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ.

ಹಾಲಿನ ಹುಡಿಯ ಪ್ಯಾಕೇಟ್ ನಲ್ಲಿರಿಸಿ ಚಿನ್ನ ಸಾಗಾಟ ಯತ್ನ ನಡೆಸಲಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಆರೋಪಿ ಹಾಗೂ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!