

ಮಂಗಳೂರು: ಮಂಗಳೂರಿನಿ0ದ ಉಡುಪಿ ಕಡೆಗೆ ಹೋಗುತ್ತಿದ್ದ ಬಸ್ಸಿನಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಪತ್ತೆಯಾದ ಘಟನೆ ನಡೆದಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಸ್ ನಲ್ಲಿ ಒಟ್ಟಿಗೆ ಪ್ರಯಾಣಿಸುತ್ತಿದ್ದ ಕಾಲೇಜು ವಿಧ್ಯಾರ್ಥಿನಿ ವಿಧ್ಯಾರ್ಥಿಗೆ ತರಾಟೆ ತೆಗೆದುಕೊಂಡಿದ್ದಾರೆ, ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಉಡುಪಿ: ಹಾಡಹಗಲೇ ಬಸ್ಸಿನಲ್ಲಿ ಮುಸ್ಲಿಂ ಯುವಕನೊಂದಿಗೆ ಯುವತಿಯ ರಾಸಲೀಲೆ; ವೀಡಿಯೋ ವೈರಲ್..!
ಶಿವಮೊಗ್ಗದ ವಿದ್ಯಾರ್ಥಿ ಮತ್ತು ಉಡುಪಿಯ ವಿದ್ಯಾರ್ಥಿನಿ ನಗರ ಹೊರವಲಯದ ಮಂಗಳೂರಿನ ಖಾಸಗಿ ಕಾಲೇಜೊಂದರ ವಿದ್ಯಾಭ್ಯಾಸ ಮಾಡುತ್ತಿದ್ದು, ಮಂಗಳೂರಿನ ಸರ್ವಿಸ್ ಬಸ್ ನಿಲ್ದಾಣದಲ್ಲಿ ಉಡುಪಿಗೆ ತೆರಳುವ ಬಸ್‌ನಲ್ಲಿ ಕುಳಿತಿದ್ದರು. ಇದನ್ನು ಕಂಡ ಕೆಲವರು ಬಸ್‌ನೊಳಗೆ ನುಗ್ಗಿದ್ದು, ವಿದ್ಯಾರ್ಥಿನಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿದ್ಯಾರ್ಥಿಯ ಗುರುತಿನ ಚೀಟಿ ಮತ್ತು ವಿಳಾಸವನ್ನು ಕೇಳಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಕಮಿಷನರ್ ಶಶಿಕುಮಾರ್, ಪ್ರಕರಣದ ಬಗ್ಗೆ ಮತ್ತು ವಿದ್ಯಾರ್ಥಿಗಳು ಎಲ್ಲಿಯವರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.


