Monday, June 22, 2026
spot_imgspot_img
spot_imgspot_img

ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುವ ಶಿಕ್ಷಕಿ.! ಅಪರೂಪದ ಘಟನೆ

- Advertisement -
- Advertisement -
astr

ಶಾಲಾ ಶಿಕ್ಷಕಿಯೊಬ್ಬರು ಶಾಲೆಯಲ್ಲಿಯೇ ಮದ್ಯ ಸೇವಿಸಿ ಅಧಿಕಾರಿಗಳ ಕೈಯಲ್ಲಿ ಸಿಕ್ಕಿಬಿದ್ದ ಅಪರೂಪದ ಘಟನೆ ತುಮಕೂರಿನಲ್ಲಿ ನಡೆದಿದೆ. ಮದ್ಯ ಸೇವಿಸಿ ಸಿಕ್ಕಿ ಬಿದ್ದ ಶಿಕ್ಷಕಿಯನ್ನು ಗಂಗಲಕ್ಷ್ಮಮ್ಮ ಎನ್ನಲಾಗಿದೆ. ತುಮಕೂರಿನ ಚಿಕ್ಕಸಾರಂಗಿ ಸರಕಾರಿ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿಯೊಬ್ಬರು ಶಾಲೆಯಲ್ಲೇ ಮದ್ಯ ಸೇವಿಸಿ ಅಧಿಕಾರಿಗಳ ಕೈಯಲ್ಲಿ ಸಿಕ್ಕಿ ಬಿದ್ದಿದ್ದಾರೆ.

ಕಳೆದ 25 ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಗಂಗಲಕ್ಷ್ಮಮ್ಮ 5 ವರ್ಷಗಳಿಂದ ಮದ್ಯ ವ್ಯಸನದ ಚಟ ಬೆಳೆಸಿಕೊಂಡಿದ್ದರು. ಮದ್ಯ ಸೇವಿಸಿ ತರಗತಿಯಲ್ಲಿ ಪಾಠ ಮಾಡುತ್ತಿದ್ದರು. ಇಂತಹ ಸಮಯದಲ್ಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗ್ರಾಮಸ್ಥರೊಂದಿಗೆ ಶಾಲೆಗೆ ಆಗಮಿಸಿದ ವೇಳೆ ಗಂಗಲಕ್ಷ್ಮಮ್ಮ ಅಧಿಕಾರಿಗಳು ಮತ್ತು ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾರೆ. ಶಿಕ್ಷಕಿಯ ಟೇಬಲ್‌ನ ಡ್ರಾಯರ್‌ನಲ್ಲಿ ಪರಿಶೀಲಿಸಿದಾಗ ಮದ್ಯದ ಬಾಟಲಿಗಳು ಪತ್ತೆಯಾಗಿದೆ. ಈ ಬಾಟಲಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆಂದು ತಿಳಿದು ಬಂದಿದೆ.

- Advertisement -

Related news

error: Content is protected !!