- Advertisement -
- Advertisement -
ನೆಲಮಂಗಲ: ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿ ನಡೆದಿದೆ.
ನೆಲಮಂಗಲದ ಪೇಟೆ ಬೀದಿಯ ಹಿಪ್ಪೇ ಆಂಜನೇಯ ಬಡಾವಣೆಯ ನಂದೀಶ್ ಅವರಿಗೆ ಸೇರಿದ ಮಹೀಂದ್ರ ಎಕ್ಸ್ ಯುವಿ 500 ಕಾರಿಗೆ ಬೆಂಕಿ ತಗುಲಿದೆ. ಸದ್ಯ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದೆ. ಯಾರೋ ಕಿಡಿಗೇಡಿಗಳೇ ಬೇಕಂತಲೇ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
- Advertisement -