- Advertisement -




- Advertisement -
ಚಿಕ್ಕಮಗಳೂರು: ಮರಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬೆಟ್ಟದತಾವರಕೆರೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶ್ರೀನಿವಾಸ್ ಹಾಗೂ ಪತ್ನಿ ಶ್ವೇತ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಮಕ್ಕಳಿಗೆ ಗಂಭೀರವಾಗಿ ಗಾಯವಾಗಿದೆ. ಮಕ್ಕಳನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ದಂಪತಿ ತಮ್ಮ ಮಕ್ಕಳೊಂದಿಗೆ ಬೆಂಗಳೂರಿನಿಂದ ಭದ್ರಾವತಿಗೆ ಸಂಬಂಧಿಕರ ಮದುವೆ ನಿಶ್ಚಿತಾರ್ಥಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -