- Advertisement -
- Advertisement -


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ ಹಾಗೂ ಬಾಲ ವಿಕಾಸ ಸಮಿತಿ ಮತ್ತು ಸ್ತ್ರೀ ಶಕ್ತಿ ಸಂಘ ಪಡಿಬಾಗಿಲು ಮತ್ತು ಅಂಗನವಾಡಿ ಕೇಂದ್ರ ಭೀಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪಡಿಬಾಗಿಲು ಅಂಗನವಾಡಿ ವಠಾರದಲ್ಲಿ ದಿನಾಂಕ ಇಂದು ಬೆಳಗ್ಗೆ 9:30ಕ್ಕೆ ಸರಿಯಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.

ಬಳಿಕ ಉಪಾಹಾರ, 10 ಗಂಟೆಯಿಂದ ಶ್ರಮದಾನ ಕಾರ್ಯಕ್ರಮ ನಡೆಯಿತು. ಬೆಳಗ್ಗೆ 11:30 ರಿಂದ ಸಭಾ ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀ ಬಾಬು ಪಾಟಾಳಿ ಇವರನ್ನು ಸನ್ಮಾನಿಸಲಾಯಿತು ಹಾಗೂ ಪಡಿಬಾಗಿಲಿನ ರಿಕ್ಷಾ ಚಾಲಕರ ಸಾಮಾಜಿಕ ಕಳಕಳಿಯನ್ನು ಗುರುತಿಸಿ ಗೌರವ ಸಮರ್ಪಣೆ ಮಾಡಲಾಯಿತು. ಪುಟಾಣಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಲಾಯಿತು.



- Advertisement -








